ಮಂಡ್ಯ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದಿಂದ ಪತಿ ಯುವಕನೊಬ್ಬನನ್ನು ಗುಂಡಿಟ್ಟು ಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೋವಿನಹಳ್ಳಿಯಲ್ಲಿ ನಡೆದಿದೆ.
ಶಿವರಾಜು ಎಂಬಾತ ಗುಂಡಿನ ದಾಳಿ ನಡೆಸಿದ ವ್ಯಕ್ತಿಯಾಗಿದ್ದು, ಯುವಕ ಮಂಜು ಎಂಬಾತ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ಸದ್ಯ ಮಂಜುನನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಶಿವರಾಜು ಮುಂಬೈನಲ್ಲಿ ಹೋಟೆಲ್ ನಲ್ಲಿ ಕೆಲಸದಲ್ಲಿದ್ದ. ಕೆಲದಿನಗಳ ಹಿಂದೆ ಮನೆಗೆ ಬಂದಿದ್ದ. ತನ್ನ ಪತ್ನಿ ಜೊತೆ ಯುವಕ ಮಂಜು ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ ಮನೆಯ ಜಗುಲಿಯ ಮೇಲೆ ಕುಳಿತಿದ್ದ ಮಂಜುವಿನ ಮೇಲೆ ಗುಂಡು ಹಾರಿಸಿದ್ದಾನೆ.
ಗುಂಡೇಟಿನಿಂದ ಯುವಕನ ತಲೆಗೆ ಗಂಭೀರವಾಗಿ ಗಾಯವಾಗಿದೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿ ಶಿವರಾಜುನನ್ನು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


