ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಹಿನ್ನೆಲೆ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಅಪಾರ್ಟ್ಮೆಂಟ್ ಗೆ ಹೋಗೋದು, ಬರುವುದನ್ನು ಮಾಡುತ್ತಿದ್ದರು. ಕಳೆದ ಐದಾರು ದಿನಗಳಿಂದ ಗುರುಪ್ರಸಾದ್ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿರಲಿಲ್ಲ. ಸ್ಥಳೀಯ ನಿವಾಸಿಗಳು ಹೇಳುವ ಪ್ರಕಾರ ಅವರು ಐದಾರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಕೆಲವು ವಿಚಾರಗಳ ಬಗ್ಗೆ, ಹಣಕಾಸು ವಿಚಾರವಾಗಿಯೂ ಗುರುಪ್ರಸಾದ್ ಬೇಸರದಲ್ಲಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ. ಫ್ಲ್ಯಾಟ್ ಬಾಗಿಲು ತೆಗೆದು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಘಟನೆಯ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296