ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ವರ್ಷ ಪತ್ನಿಯೊಂದಿಗೆ ವೈಮನಸ್ಸು ಮೂಡಿತ್ತು. ತನ್ನ ಪತ್ನಿ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ರಮೇಶ್ ಅನುಮಾನ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು.
ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಕಂಟ್ರೋನೆಂಟ್ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


