ಚಿತ್ರದುರ್ಗ: ಮುಸ್ಲಿಂ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಅನ್ಯಕೋಮಿಯವರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣವೊಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯಲ್ಲಿ ನಡೆದಿದೆ.
ಸಾಮಾಜಿಕ ಕಾರ್ಯಕರ್ತ ಬಿ.ಎಚ್.ಗೌಡ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಈತ ಮುಸ್ಲಿಂ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾನೆಂದು ಆರೋಪ ಮಾಡಲಾಗಿದೆ. ಇದು ಈ ಮಹಿಳೆಯ ಕುಟುಂಬಸ್ಥರಿಗೆ ತಿಳಿದು ಬಿಎಚ್ ಗೌಡರ ಕಾರನ್ನು ಅಡ್ಡಗಟ್ಟಿ ಹೊರಗೆಳೆದು, ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ.
ಈ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA