ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೌಡನಹಳ್ಳಿ ತೋಟದ ಮನೆಯಲ್ಲಿ ಗುರುವಾರ ಗೌರಮ್ಮ (55) ಮೃತಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗೌರಮ್ಮ ಅವರ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗೌರಮ್ಮ ಮತ್ತು ಆಕೆಯ ಮಗ ಇಬ್ಬರೇ ತೋಟದ ಮನೆಯಲ್ಲಿ ವಾಸವಿದ್ದರು. ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದ ಮಗ, ಮಧ್ಯಾಹ್ನ ತಾಯಿಯ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುವುದನ್ನು ಕಂಡು ಗಾಬರಿಗೊಂಡಿದ್ದರು. ತಕ್ಷಣ ಮನೆಗೆ ಮರಳಿದಾಗ ಗೌರಮ್ಮ ಮೃತಪಟ್ಟಿರುವುದು ತಿಳಿದುಬಂದಿದೆ.
ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಮೀನು ವಿಚಾರವಾಗಿ ನಮಗೂ ಮತ್ತು ನಮ್ಮ ದೊಡ್ಡಪ್ಪ ಅವರಿಗೂ ಆಗ್ಗಾಗ್ಗೆ ಜಗಳ ನಡೆಯುತ್ತಿತ್ತು. ಈ ಘಟನೆಗೂ ಅವರಿಗೂ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


