ಚಿಕ್ಕಮಗಳೂರು: ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಬಳಿ ನಡೆದಿದೆ.
ವಿದ್ಯುತ್ ಹರಿಸಿ ಆನೆಯನ್ನು ಕೊಲ್ಲಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು ಎನ್ನಲಾಗಿದೆ.
ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಒತ್ತಾಯ ಕೇಳಿಬಂದಿದೆ. ಇತ್ತೀಚೆಗೆ ಮೂಡಿಗೆರೆ,ಆಲ್ದೂರು ಸುತ್ತಮುತ್ತ ಆನೆ ಊರಿಗೆ ಬಂದು ಸಂಘರ್ಷ ಜೋರಾಗಿತ್ತು ಮತ್ತು ಅಧಿಕಾರಿಗಳು ಇದು ಅನಿರೀಕ್ಷಿತ ಸಾವಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA