ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮಾರ್ವೇಶ್ (19) ಎಂಬ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹೆಣ್ಣೂರು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
‘ಅಸ್ವಸ್ಥಗೊಂಡಿದ್ದ ಮಾರ್ವೇಶ್ ನನ್ನು ಜಿಯಾನ್ ಆಸ್ಪತ್ರೆಗೆ ಸುನೀಲ್ ಎಂಬಾತ ಕರೆ ತಂದು ದಾಖಲಿಸಿದ್ದ. ಅಷ್ಟರಲ್ಲಿಯೇ ವಿದ್ಯಾರ್ಥಿ ಮೃತಪಟ್ಟಿದ್ದ. ಸ್ಥಳಕ್ಕೆ ತೆರಳಿದ ಬಾಣಸವಾಡಿ ಪೊಲೀಸರು, ಪರಿಶೀಲಿಸಿ ಪೋಷಕರಿಗೆ ಮಾಹಿತಿ ನೀಡಿದ್ದರು.
ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಗೊತ್ತಿದ್ದವರೇ ಮನೆಯ ಬಳಿಗೆ ಮಾರ್ವೇಶ್ ಬಗ್ಗೆ ವಿಚಾರಿಸಿದ್ದರು. ಯುವತಿ ವಿಚಾರಕ್ಕೆ ಗಲಾಟೆ ನಡೆದಿರುವ ಅನುಮಾನವಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


