ನಂಜನಗೂಡು: ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತನ್ನು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧದಿಂದ ಯಾವುದೇ ಪ್ರಯೋಜನವಿಲ್ಲ. ದಲಿತ, ಹಿಂದುಳಿದ ವರ್ಗದವರನ್ನು ಮುಖ್ಯ ವಾಹಿನಿಗೆ ತರುವುದನ್ನು ಮಠಾಧೀಶರು ಮಾಡಬೇಕು. ಮತಾಂತರ ಆಗುವುದು ಕೊನೆಯಾಗಬೇಕು. ಆಸೆಗಳಿಗೆ ಒಳಗಾಗಬಾರದು. ಮಠದ ಶ್ರೀಗಳು ಮತಾಂತರ ಆದವರನ್ನು ಮರಳಿ ಹಿಂದೂ ಧರ್ಮಕ್ಕೆ ಕರೆತರುವಂತೆ ಮಾಡಬೇಕೆಂದು ಮನವಿ ಮಾಡಿದರು.
ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶ್ರೀಗಳ ಕೊಡುಗೆ ಅಪಾರವಾಗಿದೆ. ಕಳೆದ ಎಂಟು ವರ್ಷಗಳಲ್ಲಿ ವಿಶ್ರಾಂತಿ ಪಡೆಯದೆ ಪ್ರಧಾನಿ ನರೇಂದ್ರ ಮೋದಿಯವರು ಕೆಲಸ ಮಾಡಿದ್ದಾರೆ. ಅವರೇ ಮುಂದಿನ ಪ್ರಧಾನಿಯಾಗಬೇಕು. ಮುಖ್ಯಮಂತ್ರಿಯಾಗಿದ್ದಾಗ ನಾನು ಬಜೆಟ್ ನಲ್ಲಿ ಮಠಗಳಿಗೆ ಅನುದಾನ ನೀಡಿದ್ದೆ. ಸುತ್ತೂರು ಶ್ರೀಗಳು ರಾಜ್ಯದ ಹಲವಾರು ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕೊಟ್ಟಿದ್ದಾರೆ. ಮೈಸೂರು ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿದ್ದೆ ಎಂದರು.
ಈ ಸಂದರ್ಭದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಬೈರತಿ ಬಸವರಾಜ್, ಪುರುಷೋತ್ತಮನಂದಪುರಿಸ್ವಾಮಿಜೀ, ಕಾಪು ಸಿದ್ದಲಿಂಗಸ್ವಾಮಿ ಭಾಗವಹಿಸಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


