ಬೆಳಗಾವಿ: ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಎಂಇಎಸ್ ಪುಂಡಾಟಿಕೆಯನ್ನು ಪ್ರಶ್ನಿಸಿ ನಡೆದ ಪ್ರತಿಭಟನೆಯ ವೇಳೆ ಎಂಇಎಸ್ ವಿರುದ್ಧ ಮಾತನಾಡದ ಜನಪ್ರತಿನಿಧಿಗಳ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯ ನೂಕೂಟ ತಳ್ಳಾಟ ನಡೆದಿದೆ. ಬಳಿಕ ಕನ್ನಡ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನಾರಾಯಣಗೌಡ, ಎಂಇಎಸ್ ವಿರುದ್ಧ ಮಾತನಾಡದವರು ರಣಹೇಡಿಗಳು, ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.