ತುಮಕೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆಯು ಪ್ರತಿವರ್ಷದಂತೆ ಈ ವರ್ಷವೂ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ 2025 ರಲ್ಲಿ ಪ್ರಕಟಗೊಂಡ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ 4 ಪ್ರಕಾರದ, 4 ಕೃತಿಗಳಿಗೆ (ಅದರಲ್ಲಿ ಒಂದು ಡಾ.ಸಿ.ಸೋಮಶೇಖರ್/ ಸರ್ವಮಂಗಳಮ್ಮ ಸಾಹಿತ್ಯ ಸೇವಾ ಪ್ರತಿಷ್ಠಾನ (ರಿ) ಬೆಂಗಳೂರು ದತ್ತಿ ಪ್ರಶಸ್ತಿ ಸೇರಿದೆ) ಕಥೆ, ಕಾದಂಬರಿ, ಕವಿತೆ, ಮಕ್ಕಳ ಸಾಹಿತ್ಯ, ನಾಟಕ ಇತ್ಯಾದಿಯಾಗಿ ತಲಾ 5000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹೊಂದಿದೆ.
ಪುಸ್ತಕದ ಮೂರು ಪ್ರತಿಗಳನ್ನು ಮೇ 30ರ ಒಳಗೆ ಕಳುಹಿಸಬೇಕೆಂದು ವೇದಿಕೆಯ ಅಧ್ಯಕ್ಷರಾದ ದ್ವಾರನಕುಂಟೆ ಪಾತಣ್ಣ ಅವರು ತಿಳಿಸಿದ್ದಾರೆ. ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ದ್ವಾರನಕುಂಟೆ ಪಾತಣ್ಣ, ಅಧ್ಯಕ್ಷರು ಸ್ವಾಭಿಮಾನಿ ಕರ್ನಾಟಕ ವೇದಿಕೆ, ನಂ.118, ‘ಹೊಂಬೆಳಕು’ 5ನೇ ಕ್ರಾಸ್, ಹೆಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು-560073 ಇಲ್ಲಿಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9686073837 ಇವರನ್ನು ಸಂಪರ್ಕಿಸುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


