ಭಾರತದ ಎಲ್ಲ ನಗರ ಮತ್ತು ಪಟ್ಟಣಗಳು ಸಂಪೂರ್ಣವಾಗಿ ತೆರೆದ ಚರಂಡಿಗಳು ಹಾಗೂ ಮಲಗುಂಡಿಗಳಿಂದ ಮುಕ್ತವಾಗಲು ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹೇಳಿದರು.
ಕೇಂದ್ರ ಬಜೆಟ್—2023ನಲ್ಲಿ ಈ ವಿಚಾರ ತಿಳಿಸಿದ ಅವರು, ನಗರದಲ್ಲಿ ಮ್ಯಾನ್ ಹೋಲ್ ಮತ್ತು ಮಿಷನ್ ಹೋಲ್ ಮಾದರಿಗಳು ಬರಬೇಕು, ಇದಕ್ಕಾಗಿ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಘೋಷಿಸಿದರು.
ರಾಸಾಯನಿಕ ಮುಕ್ತ ಕೃಷಿ:
ಕೃಷಿ ಪದ್ಧತಿಗೆ ಅಗತ್ಯ ಬೆಂಬಲ ಒದಗಿಸಲು ಪರಿಣಿತರ ಸಮಿತಿಯನ್ನು ರೂಪಿಸಲಾಗುವುದು. ಸಹಜ/ಸಾವಯವ ಕೃಷಿಗೆ ಮರಳುವ 1 ಕೋಟಿ ರೈತರಿಗೆ ಸರ್ಕಾರದ ನೆರವು ಸಿಗಲಿದೆ ಎಂದು ಸಚಿವರು ಘೋಷಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


