ಮಧುಗಿರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಯುಕ್ತ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಐಡಿಹಳ್ಳಿ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸ್ವಾಮಿ ವಿವೇಕಾನಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಕೌಶಲ್ಯ ತರಬೇತಿ ಕೇಂದ್ರ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್ ಮಾತನಾಡಿ, ವಿದ್ಯಾರ್ಥಿಗಳು, ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿಯನ್ನು ಪಡೆದುಕೊಳ್ಳುವ ಮೂಲಕ ವಿವೇಕಾನಂದರ, ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಮಾತನ್ನು ಅನುಸರಿಸಬೇಕಿದೆ ಎಂದರು.
ವಿದ್ಯಾಭ್ಯಾಸದ ನಂತರ ಉನ್ನತ ಶಿಕ್ಷಣ, ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ವಿವಿಧ ಕೌಶಲ್ಯಗಳು ಪ್ರಾಮುಖ್ಯ ವಾಗಿದೆ. ಆದ್ದರಿಂದ ಆಶಯದಂತೆ ವಿದ್ಯಾರ್ಥಿಗಳು ಈ ತರಬೇತಿಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಂಜುನಾಥ್, ಐಡಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನರಸಿಂಹ ರೆಡ್ಡಿ,ದೀಪಿಕಾ ವೆಂಕಟೇಶ್, ಸಿಬ್ಬಂದಿಗಳಾದ ತನುಜಾ, ಪೂಜಾ, ಮಾನಸ, ಕಾವ್ಯ, ಚೇತನ್, ಅಂಜಿನಪ್ಪ ಮತ್ತು ಸ್ಥಳೀಯ ಮುಖಂಡರುಗಳು ಪಂಚಾಯಿತಿ ಸದಸ್ಯರುಗಳು ಹಾಗೂ ಕಾಲೇಜಿನ ಶಿಕ್ಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy