ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತಾಗಿ ವಿವಿಧ ಸಮುದಾಯಗಳ ಸ್ವಾಮೀಜಿಗಳು ತಮ್ಮ ಸಮುದಾಯ ನಾಯಕರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಹೇಳಿಕೆ ನೀಡುತ್ತಿದ್ದಾರೆ.
ಇದರ ನಡುವೆಯೇ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರೂ ರಾಜಕೀಯ ವಿಚಾರಕ್ಕೆ ಎಂಟ್ರಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವಾಮೀಜಿಗಳು ರಾಜಕೀಯ ಮಾಡುವುದಾದರೆ, ಆ ಸ್ವಾಮೀಜಿ ಪಟ್ಟಕ್ಕೂ ಚುನಾವಣೆ ನಡೆಸುವುದು ಒಳಿತಲ್ಲವೇ ಎಂದು ಪ್ರಶ್ನಿಸಿದ್ದಾರೆ. ಗುರು ಕಿರಣ್ ಅವರ ಪೋಸ್ಟ್ ಗೆ ಕೆಲವರು ನಿಮ್ಮ ಪ್ರಶ್ನೆ ಸರಿಯಾಗಿದೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಇನ್ನು ಸ್ವಾಮೀಜಿಗಳು ಗೋಡಂಬಿ ದ್ರಾಕ್ಷಿ ತಿಂದುಕೊಂಡು ಆರಾಮವಾಗಿರಲಿ. ರಾಜಕಾರಣ ವಿಚಾರ ಅವರಿಗೇಕೆ ಎಂದು ಕಮೆಂಟಿಸುತ್ತಿದ್ದಾರೆ.
ಈ ಬಗ್ಗೆ ಸ್ವಾಮೀಜಿಗಳು ತಮ್ಮ ಅಭಿಪ್ರಾಯಗಳನ್ನು ಹೇಳಲಿ, ಆದರೆ ಯಾವುದೇ ಒಂದು ಪಕ್ಷಕ್ಕೆ ಅದರದೇ ಆದ ಹೈಕಮಾಂಡ್, ಶಾಸಕರ ಒಮ್ಮತದಿಂದ ಸಿಎಂ ಮಾಡಲಾಗುತ್ತದೆ. ಸ್ವಾಮೀಜಿಗಳು ಹೇಳಿದ ಕೂಡಲೇ ಸಿಎಂ ಬದಲಾವಣೆ ಮಾಡಲಾಗದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


