ಸರಗೂರು : ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು.ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಕಾಂಗ್ರೆಸ್ ಟೌನ್ ಅಧ್ಯಕ್ಷ ಹಾಗೂ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ವಾಮೀಜಿಗಳು ಹೇಳಿಕೆ ಕೊಟ್ಟಿರುವ ಬಗ್ಗೆ ಬುಧವಾರದಂದು ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ ಅವರು, ಮುಸಲ್ಮಾನರ ಮತದಾನದ ಹಕ್ಕು ಹಿಂಪಡೆಯಬೇಕು ಎಂಬ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಇಂತಹ ವಿವಾದಾತ್ಮಕ ಇಂತ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು ರಾಜಕಾರಣದಿಂದ ದೂರ ಇರೋದು ಒಳ್ಳೆಯದು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಶ್ನೆಗೂ ಬಂದಿರುವ ಹಕ್ಕು. ಇಲ್ಲಿ ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು ಎಂದು ತಿಳಿಸಿದರು.
ಸಾರ್ವಜನಿಕರು ನಿಮ್ಮಗಳ ದೇವರು ಎಂದುಕೊಂಡಿದ್ದಾರೆ ಅದರಂತೆ ತಾವುಗಳು ಇದ್ದಾರೆ ಸಾಕು. ರಾಜಕೀಯ ಮಾಡೋಕ್ಕೆ ಬಂದರೆ ಬನ್ನಿ ಇಲ್ಲಾಂದ್ರೆ ಮಠದಲ್ಲಿ ಸ್ವಾಮೀಜಿ ಪೇಜಾವರ ಶ್ರೀಗಳು ಮಠದಲ್ಲೇ ಇರಿ ಎಂದು ಆಗ್ರಹಿಸಿದರು.
ಸಂವಿಧಾನ ವಿಚಾರಕ್ಕೆ ಬಂದರೆ ಯಾರೂ ಸುಮ್ಮನೆ ಇರುವುದಿಲ್ಲ. ಸಂವಿದಾನವನ್ನು ಬರೆದಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಎಲ್ಲಾರಿಗೂ ಸಮಾನತೆ ಸಾರಿದ್ದಾರೆ ಮತದಾನ ನಮ್ಮ ಹಕ್ಕು ಯಾರೇ ಸ್ವಾಮೀಜಿಗಳು ಬಂದರೂ ಅವರ ವಿರುದ್ಧ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮುಂದಿನ ದಿನಗಳಲ್ಲಿ ಸ್ವಾಮೀಜಿಗಳ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂವಿಧಾನ ಬದಲಾವಣೆ ಕುರಿತು ರಾಷ್ಟ್ರದ್ರೋಹದ ಹೇಳಿಕೆ ನೀಡಿರುವ ಉಡುಪಿಯ ಪೇಜಾವರ ಮಠದ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಬೇಕ ಎಂದು ಆಗ್ರಹಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q