ಬೆಂಗಳೂರು: ಮಕ್ಕಳ ಕೈಗೆ ಪೆನ್ನಿನ ಬದಲು ತಲ್ವಾರ್ ನೀಡಿ ಎಂದು ಸ್ವಾಮೀಜಿಯೊಬ್ಬರು ಹೇಳಿರುವುದು ಸರಿಯಲ್ಲ. ಇದರ ವಿರುದ್ಧ ಯಾವ ಸೆಕ್ಷನ್‌ಗಳಡಿ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂಬುದನ್ನು ಪರಿಶೀಲನೆ ನಡೆಸುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಧಾರ್ಮಿಕ ಗುರುಗಳು ಧರ್ಮವನ್ನು ಪ್ರಚಾರ ಮಾಡಬೇಕು. ಎಲ್ಲರೂ ಧಾರ್ಮಿಕ ನಾಯಕರಿಗೆ ಗೌರವ ಕೊಟ್ಟು ಕಾಲಿಗೆ ಬೀಳುತ್ತೇವೆ. ಪೂಜ್ಯನೀಯ ಸ್ಥಾನದಿಂದ ನೋಡುತ್ತೇವೆ. ಅವರು ಎಲ್ಲರನ್ನೂ ಸಮಾನವಾಗಿ ನೋಡಬೇಕು. ಅಂತಹವರು ಪ್ರಚೋದನೆಯ ಮಾತುಗಳನ್ನಾಡುವುದು ಸೂಕ್ತವಲ್ಲ ಎಂದರು.
ಕಾವಿ ಬಟ್ಟೆ ಹಾಕಿದವರು, ಮುಸ್ಲಿಂ ಸೇರಿದಂತೆ ಯಾವುದೇ ಧರ್ಮದ ಮುಖಂಡರಾದರೂ ನಿಷ್ಪಕ್ಷಪಾತವಾಗಿರಬೇಕು. ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q