ಸ್ವಂತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಹರಿಹರ ತಾಲೂಕಿನ ದುರಗಪ್ಪ ಜೈಲು ಪಾಲಾದ ಅಪರಾಧಿ, ಈತ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ. ಈ ವಿಚಾರ ಬೆಳಕಿಗೆ ಬಂದ ಬಳಿಕ ಹರಿಹರ ಗ್ರಾಂ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ ಸಂತ್ರಸ್ತೆಗೆ ಸರ್ಕಾರ 5 ಲಕ್ಷ ರೂ ಪರಿಹಾರ ನೀಡುವಂತೆ ಸೂಚಿಸಿದೆ.
ಈ ಅಪರಾಧಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಬಟ್ಟೆ ಹಾಗೂ ತಿಂಡಿ ಕೊಡುತ್ತಾ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ. ವಿಚಾರ ತಿಳಿದ ನಂತರ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್, ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ ಸಾಕ್ಷಿಗಳ ವಿಚಾರಣೆ ಮಾಡಿದ್ರೆ, ಕೆಜಿ ಜಯಪ್ಪ ಸಂತ್ರಸ್ಥೆ ಪರ ವಾದ ಮಂಡನೆ ಮಾಡಿದ್ರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy