ತಿಪಟೂರು: ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಾಗ ಬಿಜೆಪಿ ನಾಯಕರು ಎಲ್ಲಿದ್ದರು ಎಂದು ಮಾಜಿ ಶಾಸಕ ಕೆ ಷಡಕ್ಷರಿ ಪ್ರಶ್ನಿಸಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವ ಪ್ರಯುಕ್ತ ಆಗಸ್ಟ್ ಒಂದರಿಂದ ಏಳು ದಿನ ಓ ಹಮ್ಮಿಕೊಂಡಿರುವ ಪಾದಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಈ ದೇಶದಲ್ಲಿರುವ ಅಂದಾಜು 18 ರಿಂದ 20 ಕೋಟಿ ಮುಸಲ್ಮಾನರ ಮತಗಳು ಬೇಕಿಲ್ಲ ಎಂದು ಹೇಳುವ ಮೂಲಕ ಹಿಂದೂ ಮತ ಪಡೆಯುವ ಗಿಮಿಕ್ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಇದೇ ವೇಳೆ ಅವರು ಟೀಕಿಸಿದರು.
ಇನ್ನೂ ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷಕ್ಕೆ ಜೈಕಾರವಿರಲಿ ನಾಯಕರಿಗೆ ಬೇಡ ಎಂದು ಹೇಳಿದರು
ಕಾಂಗ್ರೆಸ್ ಮುಖಂಡ ಲೋಕೇಶ್ವರ್ ಮಾತನಾಡಿ, ಚಡ್ಡಿ ಸುಡುವ ಮೂಲಕ ಕೇವಲ ಸಾಂಕೇತಿಕ ಪ್ರತಿಭಟನೆ ಮಾಡಿದ ಎನ್ ಎಸ್ ಯು ವಿದ್ಯಾರ್ಥಿಗಳು ದೇಶದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ. ಅವರನ್ನು ದೆಹಲಿಗೆ ಕರೆಸಿ ಸನ್ಮಾನಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ತಾಲೂಕು ಅಧ್ಯಕ್ಷ ಮಡೆನೂರು ಕಾಂತರಾಜ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ನ್ಯಾಕೇನಹಳ್ಳಿ ಸುರೇಶ್, ನಗರಸಭಾ ಸದಸ್ಯ ಯೋಗೀಶ್ ಹಾಗೂ ಲೋಕನಾಥ್ ಸಿಂಗ್ ಹಲವಾರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು
ವರದಿ: ಆನಂದ್ ತಿಪಟೂರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz