‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದು, ಮತ್ತೆ ತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
‘ನಿನಗಾಗಿ’ ಎಂಬ ಸಿರಿಯಲ್ ನಲ್ಲಿ ಪೂಜಾ ಗಾಂಧಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾ ನಟಿಯೊಬ್ಬರ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್ ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ.
ಈ ಸೀರಿಯಲ್ ಗೆ ಪೂಜಾ ಗಾಂಧಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಪೂಜಾ ಗಾಂಧಿ ಜೊತೆಗಿನ ಫೋಟೋಗಳನ್ನು ದಿವ್ಯಾ ಉರುಡುಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಧಾರಾವಾಹಿಯಲ್ಲಿ ನಟಿಸುತ್ತಿರುವ ಸಹಕಲಾವಿದರು ಕೂಡ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮುಂಗಾರು ಮಳೆ, ಮಿಲನಾ, ಕೃಷ್ಣ, ಅನು, ತಾಜ್ ಮಹಲ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


