ರಾಮನ್ ಸಂಶೋಧನಾ ಸಂಸ್ಥೆಯ (ಆರ್‌ಆರ್‌ಐ) ಮತ್ತು ಬೆಂಗಳೂರು ಪರಿಸರ ಸಂಘಟನೆ (ಇಎಬಿ) ಜಂಟಿಯಾಗಿ ‘ನಗರ ನಿರ್ವಹಣೆ ಮತ್ತು ಜಲ ಸಂರಕ್ಷಣೆ’ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ರಾಷ್ಟ್ರೀಯ ದೂರಸಂವೇದಿ ಕೇಂದ್ರದ ನಿರ್ದೇಶಕ ಡಾ. ಪ್ರಕಾಶ್ ಚೌಹಾಣ್ ಮಾತನಾಡಿ, ಇಲ್ಲಿನ ರಾಮನ್ ಸಂಶೋಧನಾ ಸಂಸ್ಥೆಯ (ಆರ್‌ಆರ್‌ಐ) ಮತ್ತು ಬೆಂಗಳೂರು ಪರಿಸರ ಸಂಘಟನೆ (ಇಎಬಿ) ಶನಿವಾರ ಜಂಟಿಯಾಗಿ ‘ನಗರ ನಿರ್ವಹಣೆ ಮತ್ತು ಜಲ ಸಂರಕ್ಷಣೆ’ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
‘ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನಲ್ಲೂ ತಾಪಮಾನ ಹೆಚ್ಚುತ್ತಿದೆ. ಕಳೆದ ಎರಡು ದಶಕಗಳಲ್ಲಿ ಬೆಂಗಳೂರಿನ ತಾಪಮಾನವೂ ಸರಾಸರಿ 1.5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ’ ಎಂದು ವಿವರಿಸಿದರು.
‘ಬೆಂಗಳೂರು ಸೇರಿದಂತೆ ಎಲ್ಲ ಪ್ರಮುಖ ನಗರಗಳು ಹಲವು ರೀತಿಯ ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ನಗರಗಳಲ್ಲಿ ನೈಸರ್ಗಿಕ ಸಂಪನ್ಮೂಲಗಳ ಕೊರತೆಯೂ ನಿರಂತವಾಗಿ ಹೆಚ್ಚುತ್ತಿದೆ. ಸಂಪನ್ಮೂಲಗಳಿಗಾಗಿ ಮತ್ತಷ್ಟು ಒತ್ತಡ ಹೆಚ್ಚಲಿದೆ’ ಎಂದರು. ಆರ್‌ಆರ್‌ಐ ನಿರ್ದೇಶಕ ಪ್ರೊ. ತರುಣ್ ಸೌರದೀಪ್, ‘ಪರಿಸರ ಸಮಸ್ಯೆಗಳನ್ನು ನಿವಾರಿಸುವುದು ಅತಿ ದೊಡ್ಡ ಸವಾಲು’ ಎಂದರು. ಇಎಬಿ ಅಧ್ಯಕ್ಷ ಡಾ. ಆರ್. ಜಿ. ನಡದೂರ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


