ಬೆಂಗಳೂರು : ಹಿಂದೆಂದೂ ಘಟಿಸದ ರೀತಿಯಲ್ಲಿ ರಾಜ್ಯದಲ್ಲಿ ಗಣೇಶ ಉತ್ಸವದ ಮೆರವಣಿಗೆಗಳ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಹಿಂದೂ ವಿರೋಧಿ ಶಕ್ತಿಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ತಂದು ಅಶಾಂತಿಯ ವಾತಾವರಣ ಸೃಷ್ಟಿಸಲು ವ್ಯವಸ್ಥಿತವಾಗಿ ತೊಡಗಿವೆ. ಸರಣಿ ಘಟನೆಗಳನ್ನು ಗಮನಿಸಿದರೆ ಹಿಂದೂ ಧಾರ್ಮಿಕ ಆಚಾರ–ವಿಚಾರಗಳನ್ನು ದಮನ ಮಾಡಲು ಒಂದು ವ್ಯವಸ್ಥಿತ ಷಡ್ಯಂತ್ರ ಈ ರಾಜ್ಯದಲ್ಲಿ ನಡೆಯುತ್ತಿರುವಂತೆ ಕಾಣುತ್ತಿದೆ ಎಂದರು.
ಕಣ್ಣು, ಕಿವಿ ಇವೆರಡನ್ನು ಮುಚ್ಚಿಕೊಂಡಿರುವ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ ತಿಳಿಗೇಡಿಗಳ ವ್ಯೂಹವನ್ನು ಭೇದಿಸಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸುವ ನಿಟ್ಟಿನಲ್ಲಿ ಗಮನ ನೀಡುವ ಬದಲು ಧಾರ್ಮಿಕ ಶ್ರದ್ಧೆಯ ಗಣೇಶೋತ್ಸವದ ಮೆರವಣಿಗೆಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ಕ್ರಮವಾಗಿದೆ. ಎಷ್ಟರಮಟ್ಟಿಗೆ ಪೊಲೀಸ್ ವ್ಯವಸ್ಥೆ ಪಕ್ಷಪಾತಿ ಹಾಗೂ ನಿಷ್ಕ್ರಿಯವಾಗಿದೆ ಎಂದರೆ, ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ತುಮಕೂರಿನ ಗಣೇಶೋತ್ಸವದ ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸದಂತೆ ನಿರ್ಬಂಧಿಸುವ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296