ಮುಸ್ಲಿಮರ ವೇಷಭೂಷಣ ಧರಿಸಿದ ನಾಯಕರ ಪೋಟೊಗೆ ಮುಸ್ಲಿಂ ಹೆಸರನ್ನು ಹಾಕಿ ವ್ಯಂಗ್ಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್‌ಗೆ ಜೆಡಿಎಸ್ ಆಕ್ಷೇಪಿಸಿದೆ. ಈ ಎರಡೂ ಪಕ್ಷಗಳ ಪಾಲಿಗೆ ಮುಸ್ಲಿಮರು ಅಬ್ಬೇಪಾರಿಗಳಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿ ಕಾರಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ ಹೆಸರು ಬೇರೆ, ಆದರೆ ಉದ್ದೇಶ ಮಾತ್ರ ಒಂದೇ. ಸಮುದಾಯಗಳ ನಡುವೆ ದ್ವೇಷ ಬಿತ್ತುವುದೇ ಇವರ ಕೆಲಸ ಎಂದು ಟೀಕಿಸಿದ್ದಾರೆ.
ಬಿಜೆಪಿಗೆ ಮುಸಲ್ಮಾನರೆಂದರೆ ಅಪಥ್ಯ, ಸದಾ ಮೇಲೆ ದ್ವೇಷ ಕಾರುವುದೇ ಜಾಯಮಾನ. ಮುಸಲ್ಮಾನರನ್ನು ಗುತ್ತಿಗೆ ತೆಗೆದುಕೊಂಡಂತೆ ವರ್ತಿಸುವ ಕಾಂಗ್ರೆಸ್ ಖಾನ್,ಉಲ್ಲಾ,ಶೇಖ್ ಎಂಬ ಮುಸ್ಲಿಂ ಹೆಸರುಗಳನ್ನು ಮತ್ತು ವೇಷಭೂಷಣಗಳನ್ನು ವ್ಯಂಗ್ಯ ಮತ್ತು ಹೀಯಾಳಿಕೆಗೆ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ಹೇಳಿದ್ದಾರೆ. ಮುಸಲ್ಮಾನರು ಪ್ರಬುದ್ಧರಾಗಿದ್ದಾರೆ ಎನ್ನುವುದನ್ನು ಬಿಜೆಪಿ ಮತತು ಕಾಂಗ್ರೆಸ್ ಪಕ್ಷಗಳು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy