ಉತ್ತರಪ್ರದೇಶ : ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ.
ಶಿವಾನಂದನ್ (35), ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಮನೆಯಲ್ಲಿ ಚಹಾ ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು.
ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ರವೀಂದ್ರ ಸಿಂಗ್, ಶಿವಾಂಗ್ ಮತ್ತು ದಿವಾನ್ಶ್ ಮೃತಪಟ್ಟಿದ್ದರು.
ಸೊಬ್ರಾನ್ ಮತ್ತು ಶಿವಾನಂದನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅಲ್ಲಿಯೂ ಇಬ್ಬರೂ ಸಾವನ್ನಪ್ಪಿದರು.
ಶಿವಾನಂದನ ಪತ್ನಿ ಭತ್ತದ ಬೆಳೆಗೆ ಸಿಂಪಡಣೆ ಮಾಡಿದ ಔಷಧವನ್ನು ಟೀ ಪುಡಿ ಎಂದು ತಪ್ಪಾಗಿ ಭಾವಿಸಿ ಚಹಾ ಮಾಡಿದ್ದಾರೆ. ಇದನ್ನು ಕುಡಿದ ಐವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy