ಮಧುಗಿರಿ: ತಾಲೂಕು ಪಂಚಾಯಿತಿ ಕಚೇರಿ ಆವರಣ ಸುತ್ತ ಮುತ್ತ ಹಲವು ವರ್ಷಗಳಿಂದ ಬೆಳೆದು ನಿಂತ ಗಿಡ ಗಂಟೆಗಳನ್ನು ನೂತನ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ್ ಸ್ವಚ್ಛ ಪಡಿಸಿದರು.
ಈ ಸಂದರ್ಭ ಮಾತನಾಡಿದ ಅವರು, ವಿಜ್ಞಾನ, ತಂತ್ರಜ್ಞಾನಗಳ ಮುಖಾಂತರ ದೇಶ ಅಭಿವೃದ್ಧಿ ಹೊಂದುತ್ತಿರುವಾಗ ಮಾನವನು ಆರೋಗ್ಯವಂತನಾಗಿ ಉಳಿಯಬೇಕಾದರೆ ಸ್ವಚ್ಛ ಸುಂದರ ಪರಿಸರವನ್ನು ಉಳಿಸಿ, ಬೆಳೆಸಬೇಕಾದದ್ದು ಅತ್ಯಗತ್ಯ. ಆದ್ದರಿಂದ ಈ ದಿನ ನಮ್ಮ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸ್ವಚ್ಛ ಪರಿಸರ ನಿರ್ಮಾಣಕ್ಕೆ ಈ ಸ್ವಚ್ಛ ಕಾರ್ಯ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧಿಕಾರಿಗಳಾದ ಮಧುಸೂದನ್, ವಸಂತ್, ಅರ್ಷಾದ್ ಹುಸೇನ್ , ಅಲ್ಪಸಂಖ್ಯಾತರ ಅಧ್ಯಕ್ಷರಾದ ಸಯ್ಯದ್ ಅಲಾವುದ್ದೀನ್ , ದಾದಾಪೀರ್ ಹಾಜರಿದ್ದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy