ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸೋಮವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 8 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಹೈದರಾಬಾದ್ 19.1 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು.
ಸತತ 3 ಗೆಲುವು ಸಾಧಿಸಿದ್ದ ಗುಜರಾತ್ ತಂಡಗ ಗೆಲುವಿನ ನಾಗಾಲೋಟಕ್ಕೆ ಹೈದರಾಬಾದ್ ಬ್ರೇಕ್ ಹಾಕಿತು. ಹಾರ್ದಿಕ್ ಪಾಂಡ್ಯ ಪಡೆಗೆ ಸೋಲಿನ ರುಚಿ ತೋರಿಸುವ ಮೂಲಕ ಕೇನ್ ವಿಲಿಯಮ್ಸನ್ ಪಡೆ 2ನೇ ಗೆಲುವು ದಾಖಲಿಸಿತು.
ವರದಿ ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy