ಮಧುಗಿರಿ: ವಸತಿ ಮತ್ತು ನಿವೇಶನ ರಹಿತರಿಗೆ ಶೀಘ್ರ ನಿವೇಶನ ವಿತರಣೆಗೆ ಕ್ರಮಕೈಗೊಳ್ಳಬೇಕೆಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕಿನ ವಸತಿ ಮತ್ತು ನಿವೇಶನ ರಹಿತರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ವಸತಿ ಹಾಗೂ ನಿವೇಶನ ಹಂಚಿಕೆ ಸಂಬಂಧಿಸಿದ ಕಾಮಗಾರಿಗಳ ಬಗ್ಗೆ ಪ್ರಸ್ತುತ ಸ್ಥಿತಿ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಸಲಹೆ-ಸೂಚನೆಗಳನ್ನು ನೀಡಿದರು. ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಅರ್ಜಿ ವಿಲೇವಾರಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಮಗ್ರವಾಗಿ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಕೆಇಆರ್ ಉಪವಿಭಾಗಾಧಿಕಾರಿಗಳ ಕಚೇರಿಯ ಮೊದಲ ಮಹಡಿಯಲ್ಲಿ ನವೀಕರಣಗೊಳಿಸಿರುವ ಹಳೆಯ ಭೂ ದಾಖಲೆಗಳ ಗಣಕೀಕರಣಗೊಂಡ ವಸತಿ ಮತ್ತು ನಿವೇಶನ ರಹಿತ ರೈತರಿಗೆ ಸೂರು ಕಲ್ಪಿಸುವುದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಸರ್ಕಾರದ ಯೋಜನೆಗಳ ಸದುಪಯೋಗವನ್ನು ಅರ್ಹರಿಗೆ ತಲುಪಿಸಬೇಕಾಗಿದೆ. ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಆದಷ್ಟು ಬೇಗ ಮಾರ್ಚ್ ಮಾಹೆಯ ಒಳಗಾಗಿ ಹಾಗೂ ತುರ್ಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ಜನರಿಂದ ಸ್ವೀಕೃತವಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದರು.
ದಾಖಲೆಗಳ ಸುರಕ್ಷತೆ ಮತ್ತು ಸುಲಭ ಲಭ್ಯತೆಯ ಗ್ಯಾರಂಟಿ ಕಚೇರಿಯ ನೂತನ ಕೊಠಡಿ ಉದ್ಘಾಟನೆ ನೆರವೇರಿಸಿದರು. ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ವ್ಯವಸ್ಥಾಪಕ ಶ್ರೀನಿವಾಸ್, ತಹಸೀಲ್ದಾರ್ ನಂದಿನಿ ಹಾಗೂ ಇಲಾಖೆಯ ಸಿಬ್ಬಂದಿ ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
