ಬೀದರ್ : ಮಳೆ ಹಾನಿಯ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ನಿಯಮದಡಿ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆ ಹಾನಿಯ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ನಗರದಲ್ಲಿ ಚರಂಡಿಗಳು ತುಂಬಿ ತುಳುಕುತ್ತಿರುವುದು ಕಂಡು ಬರುತ್ತಿದೆ. ಒಂದು ವಾರದೊಳಗೆ ಚರಂಡಿ ಸ್ವಚ್ಛತೆಗೆ ಕ್ರಮವಹಿಸಬೇಕು. ಇಲ್ಲದಿದ್ದರೆ ಇದಕ್ಕೆ ಸಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಜಿಲ್ಲೆಯ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಬಗ್ಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಅರವಿಂದ್ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW