ತುಮಕೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತಹ ಶಿಕ್ಷಕರೇ ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ಶಾಲೆಯ ಫಲಿತಾಂಶವೇ ಶಾಲೆಯ ಉತ್ತಮ ಗುಣಮಟ್ಟವನ್ನು ಅಳೆಯುತ್ತದೆ. ಆದ್ದರಿಂದ ಶಿಕ್ಷಕರು ಪ್ರಾಮಾಣಿಕತೆ, ಕರ್ತವ್ಯ ನಿಷ್ಟೆಯಿಂದ ಮಕ್ಕಳಿಗೆ ಬೋಧನೆ ಮಾಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸಿಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ‘ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತç ವಿತರಣಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಉಚಿತ ಪಠ್ಯಪುಸ್ತಕ, ಸಮವಸ್ತç ವಿತರಣೆಯಂತಹ ಕಾರ್ಯಕ್ರಮಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಗಮನಾರ್ಹ ಪಾತ್ರವಹಿಸಿವೆ. ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ. ಉತ್ತಮ ಶಿಕ್ಷಣದಿಂದಲೇ ಮನುಷ್ಯನು ಉತ್ತಮ ಹಾಗೂ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಂಡು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿ ಉತ್ತಮ ಪ್ರಜೆಯಾಗುತ್ತಾನೆ. ಗುಣಮಟ್ಟದ ಶಿಕ್ಷಣ ನೀಡಿಸ ಶಿಕ್ಷಕ ಮಕ್ಕಳ ಜೀವನದ ಕೊನೆಯವರೆಗೂ ಅವರ ನೆನಪಿನಲ್ಲಿ ಉಳಿಯುತ್ತಾರೆ. ಆದ್ದರಿಂದ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರು ಶ್ರಮಿಸುವಂತೆ ಸೂಚಿಸಿದರು.
ಇಂದು ಶಿಕ್ಷಣದ ವ್ಯಾಪಕತೆ ಹೆಚ್ಚಿದ್ದು, ಸಾವಿರಾರು ವಿಭಾಗಗಳಲ್ಲಿ ಅಧ್ಯಯನ ವಿಷಯಗಳಿದ್ದು, ವಿದ್ಯಾರ್ಥಿಗಳು ಅವರ ಜೀವನವನ್ನು ಉನ್ನತೀಕರಿಸುವ ವಿಷಯದಲ್ಲಿ ಪರಿಪೂರ್ಣತೆ ಹೊಂದಿ ಪೋಷಕರಿಗೆ ಹಾಗೂ ದೇಶಕ್ಕೆ ಗೌರವ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾಲ್ಲೂಕಿನಲ್ಲಿ ಅಧ್ಯಯನ ಮಾಡುವ ೨೮,೦೦೦ ಮಕ್ಕಳಲ್ಲಿ ೧೨,೦೦೦ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗಿದೆ. ೧೬,೦೦೦ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಗಿದೆ ಎಂದ ಅವರು, ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಮೊಟ್ಟೆ, ಶೇಂಗಾ ಚಿಕ್ಕಿ, ರಾಗಿ ಮಾಲ್ಟ್, ಬಾಳೆಹಣ್ಣು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಚಂದ್ರಶೇಖರ್ಗೌಡ, ಅರಕೆರೆ ಶಂಕರ್, , ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪೋಲಿಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ತಹಶೀಲ್ದಾರ್ ಮಂಜುನಾಥ್, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA