nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    ತುಮಕೂರು August 21, 2026

    ಎಸ್ ಐಆರ್: ಕರಡು ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯ ಕ್ರಮಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    By adminAugust 21, 2026No Comments2 Mins Read
    dc shubha kalyan.jpg

    ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(SIR)–2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ERO, AERO ಹಾಗೂ Additional–AEROಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದಂದು ಪ್ರಕಟಿಸಲು ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದರು.

    ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಪ್ರತಿದಿನ ನೋಟಿಸ್ ಜಾರಿಗೊಳಿಸಿ, ಅಗತ್ಯವಿರುವಲ್ಲಿ ವಿಚಾರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
    ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ನಿಗದಿತ ದಾಖಲೆಗಳ ಘೋಷಣೆ ಸೇರಿದಂತೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಎಲ್ಲಾ ಹಂತಗಳನ್ನು ವ್ಯವಸ್ಥಿತವಾಗಿ ಮುಗಿಸುವಂತೆ ಸೂಚಿಸಿದರು.

    ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ಸೈಟ್ಗಳಲ್ಲಿ ಅಪ್ಲೋಡ್ ಮಾಡುವುದರ ಜೊತೆಗೆ, ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಬಗ್ಗೆಯೂ ಸೂಕ್ತ ಗಮನಹರಿಸಬೇಕು. ಹೊಸದಾಗಿ ನೇಮಕಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ SIR ಪ್ರಕ್ರಿಯೆ ಹಾಗೂ ಮೊಬೈಲ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಆ್ಯಪ್ ಅನ್ನು ಸರಿಯಾಗಿ ಬಳಸುವಂತೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

    ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಆದ್ಯತೆಯ ಕರ್ತವ್ಯವಾಗಿದ್ದು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಿರ್ವಹಿಸಬೇಕು. ಹೊಸದಾಗಿ ನಿಯೋಜನೆಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಎಸ್ಐಆರ್ ಕಾರ್ಯ ಕುರಿತು ಸ್ಪಷ್ಟವಾಗಿ ತಿಳಿಸಬೇಕು. ಹೊಸ ಬೂತ್ಗಳ ಜವಾಬ್ದಾರಿ ಹೊಂದಿರುವ EROಗಳು ಹೆಚ್ಚಿನ ಗಮನಹರಿಸಿ, ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

    ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಮಾನ್ಯತೆ ಪಡೆದ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

    September 12, 2026

    ಬೀದರ್: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ…

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.