nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    ಮಧುಗಿರಿ May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    By adminMay 14, 2026No Comments2 Mins Read
    kn rajanna

    ಮಧುಗಿರಿ: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಮೇ 20ರಂದು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ನಮ್ಮ ತಾಲೂಕಿನಿಂದ ಅಧಿಕ ಜನರನ್ನು ಕರೆತರುವ ನಿಟ್ಟಿನಲ್ಲಿ 250ಕ್ಕೂ ಅಧಿಕ ಬಸ್‌ ಗಳನ್ನು ನಿಯೋಜಿಸಲಾಗಿದೆ. ಬರುವವರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಎನ್.ರಾಜಣ್ಣ ಸಲಹೆ ನೀಡಿದರು.

    ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಬುಧವಾರ 20 ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.


    Provided by
    Provided by

    ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಧಿಕಾರಿಗಳು ಅಂದು ಬೆಳಿಗ್ಗೆ ಸಕಾಲಕ್ಕೆ ಜನರನ್ನು ಹೊರಡಿಸಿ ಕಾರ್ಯಕ್ರಮಕ್ಕೆ ಕರೆತರಬೇಕು. ಇದು ನಮ್ಮ ಸರ್ಕಾರದ ಸಾಧನಾ ಸಮಾವೇಶವಾಗಿದ್ದು, ಬರುವ ಜನರು ಮೀಸಲಿರುವ ಆಸನಗಳಲ್ಲಿ ಕೂತು ವೀಕ್ಷಿಸಬೇಕು. ಸಮಾರಂಭ ಮುಗಿಯುವ ತನಕ ಯಾರೂ ಸಹ ಎದ್ದು ಬರಬಾರದು. ನಂತರ ಅವರಿಗಾಗಿ ನಿಗದಿಪಡಿಸಿರುವ ಬಸ್‌ಗಳಲ್ಲಿ ಆಯಾಯ ಗ್ರಾಮಗಳಿಗೆ ಜನರನ್ನು ಕ್ಷೇಮವಾಗಿ ಬಿಡುವುದು ಸಹ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

    ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಕರ್ನಾಟಕ ಮಾದರಿಯಲ್ಲಿ ಉಚಿತ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಆದರೆ ವಿಜಯ್ ಅವರ ಹಾದಿ ಮುಳ್ಳಿನ ಹಾದಿಯಾಗಿದ್ದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಭಾವಾವೇಶದಲ್ಲಿ ಭರವಸೆಗಳನ್ನು ನೀಡುವುದರಿಂದ ಮುಂದೆ ಎದುರಾಗುವ ಸಮಸ್ಯೆ–ಸವಾಲುಗಳನ್ನು ಹೇಗೆ ಸ್ವೀಕರಿಸಿ ಪರಿಹರಿಸಿಕೊಳ್ಳುತ್ತಾರೆನ್ನುವುದನ್ನು ಕಾದು ನೋಡಬೇಕು ಎಂದರು.

    ಕರ್ನಾಟಕದಲ್ಲಿ ಸಿ.ಎಂ.ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಶಾಸಕ ಕೆ.ಎನ್.ರಾಜಣ್ಣ ಉತ್ತರಿಸಿ, ಮೋದಿ ಆಕಾಶದಲ್ಲಿ ತೇಲಾಡುತ್ತಿದ್ದು ಅವರು ಭೂಮಿ ಮೇಲೆ ಇಲ್ಲ. ಭೂಮಿಯ ಮೇಲೆ ಇದ್ದು ಮಾತನಾಡಿದರೆ ಅದು ಅರ್ಥವಾಗುತ್ತದೆ. ಆದ್ದರಿಂದ ನಮ್ಮ ಪಕ್ಷದ ವಿಚಾರ ಅವರಿಗೆ ಯಾಕೆ ಹೇಳಬೇಕು ಎಂದು ತಿರುಗೇಟು ನೀಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಜನಾದೇಶಕ್ಕೆ ನಾವು ತಲೆಬಾಗುತ್ತೇವೆ ಎಂದು ರಾಜಣ್ಣ ತಿಳಿಸಿದರು.

    ಸಭೆಯಲ್ಲಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ತಾಪಂ ಇಒ ಲಕ್ಷ್ಮಣ್, ಎಇ ಧನಂಜಯ್, ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವಿ.ವೆಂಕಟರಾಜು, ಅಧಿಕಾರಿ ಕಲ್ಪನಾ ಬಾಯಿ, ಬಿಸಿಎಂ ಅಧಿಕಾರಿ ಜಯರಾಮ್, ಲೋಕೋಪಯೋಗಿ ಇಲಾಖೆಯ ಇಇ ಹನುಮಂತರಾವ್, ಎಇಇ ಸಂಪತ್ ಕುಮಾರ್, ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಕಾಂತರಾಜು, ಪುರಸಭಾ ಮುಖ್ಯಾಧಿಕಾರಿ ಎಸ್.ಸುರೇಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.