ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಜುಲೈ 29ರಂದು ಬೆಳಿಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಭಾಲ್ಕಿಯ ಹಿರೇಮಠ ಸಂಸ್ಥಾನದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಶಾಸಕ ಪ್ರಭು ಚವ್ಹಾಣ್ ಉದ್ಘಾಟಿಸಲಿದ್ದಾರೆ.
ಈ ಸಮಾರಂಭದಲ್ಲಿ ತಾಲೂಕಿನ ವಿವಿಧ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ಪತ್ರಿಕಾ ದಿನಾಚರಣೆಯ ಅಂಗವಾಗಿ ನಡೆಯುವ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಪತ್ರಕರ್ತರು, ಸಾಹಿತಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ವಿನಂತಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


