ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರತಿ ಕನ್ನಡಿಗನೂ ರಾಯಭಾರಿ ಎಂದು ಹೇಳಿಕೊಂಡಿದ್ದಾರೆ.
ತಮ್ಮ ಇನ್ಸ್ಟಾದಲ್ಲಿ ಸ್ಟೋರಿ ಹಂಚಿಕೊಂಡಿರುವ ಅವರು, ಉತ್ಪನ್ನಗಳ ಪ್ರಮೋಷನ್ ಗೆ ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW