ಬೆಂಗಳೂರು: ಬೆಂಗಳೂರಿನಲ್ಲಿ ಸಿನಿಮಾ ಪ್ರಚಾರವೊಂದರಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸುತ್ತಿದ್ದ ತಮಿಳು ನಟ ಸಿದ್ಧಾರ್ಥ್ ವಿರುದ್ಧ ಕರವೇ ಸ್ವಾಭಿಮಾನದ ಕಾರ್ಯಕರ್ತರು ಅಸಮಾಧಾನ ವ್ಯಕ್ತ ಪಡಿಸಿ ಸುದ್ದಿಗೋಷ್ಠಿಗೆ ತಡೆ ಒಡ್ಡಿದರು.
ಕಾವೇರಿ ನೀರು ವಿಚಾರವಾಗಿ ಎರಡು ರಾಜ್ಯದ ನಡುವೆ ಪರಿಸ್ಥಿತಿ ಹದಗೆಟ್ಟಿದೆ. ಈ ಸಮಯದಲ್ಲಿ ಇದು ಬೇಕಾ, ನಾವು ಸುದ್ದಿಗೋಷ್ಠಿ ನಿಲ್ಲಿಸಿ ಎಂದು ಆರ್ಡರ್ ಮಾಡುತ್ತಿಲ್ಲ. ಮನವಿ ಮಾಡುತ್ತಿದ್ದೇವೆ. ದಯವಿಟ್ಟು ನೀವೂ ಕಾವೇರಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಆಗ್ರಹಿಸಿದರು.


