ನವದೆಹಲಿ: ಹಿಂದಿ ಹೇರಿಕೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ವಿಚಾರವಾಗಿ ಕೇಂದ್ರ ಸರ್ಕಾರದೊಡನೆ ತಮಿಳುನಾಡು ಸರ್ಕಾರ ಸಂಘರ್ಷ ನಡೆಸುತ್ತಿದೆ. ತಮಿಳುನಾಡು ಸರ್ಕಾರದ 2025—26ನೇ ಸಾಲಿನ ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ(₹) ಬಳಸದ ತಮಿಳುನಾಡು ಸರ್ಕಾರ ರೂ. ಎಂದು ತಮಿಳು ಅಕ್ಷರದಲ್ಲೇ ಮುದ್ರಿಸುವ ಮೂಲಕ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಾದೇಶಿಕ ಹೆಮ್ಮೆಯ ನೆಪದಲ್ಲಿ ಪ್ರತ್ಯೇಕತಾವಾದಿ ಭಾವನೆಗಳನ್ನು ತಮಿಳುನಾಡು ಸರ್ಕಾರ ಉತ್ತೇಜಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಎಲ್ಲ ಚುನಾಯಿತ ಪ್ರತಿನಿಧಿಗಳು ರಾಷ್ಟ್ರ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯಲು ಸಂವಿಧಾನದ ಅಡಿಯಲ್ಲಿ ಪ್ರಮಾಣ ಮಾಡುತ್ತಾರೆ. ರಾಜ್ಯ ಬಜೆಟ್ನಿಂದ ‘₹’ನಂತಹ ರಾಷ್ಟ್ರೀಯ ಚಿಹ್ನೆಯನ್ನು ತೆಗೆದು ಹಾಕುವುದು ಈ ಪ್ರತಿಜ್ಞೆಗೆ ವಿರುದ್ಧವಾಗಿದೆ. ರಾಷ್ಟ್ರೀಯ ಏಕತೆಯನ್ನು ದುರ್ಬಲಗೊಳಿಸುತ್ತದೆ ಎಂದು ನಿರ್ಮಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4