ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 21 ರಲ್ಲಿರುವ ಶ್ರೀ ಮುರುಗನ್ ( ಸುಬ್ರಮಣ್ಯಂ) ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಸಂಕ್ರಾಂತಿ ಸಂದರ್ಭದಲ್ಲಿ ತಮಿಳರು ಪ್ರಮುಖ ತೈಮಾಸಂ ಎಂದು ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸುತ್ತಾರೆ. ಈ ತಿಂಗಳಲ್ಲಿ ಸುಬ್ರಮಣ್ಯಂ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವ ಈ ಹಬ್ಬವು ಈ ಕೊವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲ್ಪಟ್ಟಿತು.
ಪೂಜೆಯ ವೇಳೆ ಸ್ವಾಮಿ ಶ್ರೀ ಸುಬ್ರಮಣ್ಯಂ ( ಮುರುಗನ್ ) ದೇವರಿಗೆ ಹೂವಿನ ಅಲಂಕಾರ, ಕರ್ಪೂರದಾರತಿ, ಮಹಾಮಂಗಳಾರತಿ ಕಾರ್ಯಕ್ರಮಗಳು ಸರಳವಾಗಿ ಆಚರಿಸಲ್ಪಟ್ಟಿತ್ತು.
ಈ ಸಂದರ್ಭದಲ್ಲಿ ಸಕಲ ಭಕ್ತಾಧಿಗಳಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ನೆರವೇರಿಸಲ್ಪಟ್ಟಿತ್ತು . ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು, ದೇವಸ್ಥಾನದ ಅರ್ಚಕರು ಹಾಗೂ ಕುಟುಂಬಸ್ಥರು ಸುಬ್ರಮಣ್ಯಂ ಸ್ವಾಮಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy