ತಮಿಳುನಾಡಿನ ಶಿಕ್ಷಣ ಸಚಿವ ಅನ್ಸಿಲ್ ಮಹೇಶ್ ಪೊಯ್ಯಮೊಳಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕರ್ನಾಟಕದ ಗಡಿ ಜಿಲ್ಲೆ ಕೃಷ್ಣಗಿರಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದಕ್ಕೆ ಅವರು ಸೇಲಂನಿಂದ ತೆರಳುತ್ತಿದ್ದಾಗ ಸಚಿವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಬೊಮ್ಮಸಂದ್ರದ ಬಳಿ ಇರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು.
ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸಂಚಾರ ದಟ್ಟಣೆ ಸಮಸ್ಯೆಯೂ ಎದುರಾಗಿತ್ತು. ಕೊನೆಗೂ ಅವರನ್ನು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅನ್ಸಿಲ್ ಮಹೇಶ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.


