ಹೈದರಾಬಾದ್: ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ.
ಈ ಹಿಂದೆಯೂ ಖುಷ್ಬೂ ತಮ್ಮ ತಂದೆಯಿಂದಲೇ ಲೈಂಗಿಕ ಕಿರುಕುಳ ಎದುರಿಸಿದ್ದ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಖುಷ್ಬು ಅವರು, ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ ಎಂದು ಹೇಳಿದ್ದಾರೆ.
ನಾನು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿಲ್ಲ, ಆ ಹೇಳಿಕೆ ನನ್ನಿಂದ ಹೊರಬಂದ ಪ್ರಾಮಾಣಿಕತೆ ಎಂದು ನಾನು ಭಾವಿಸುತ್ತೇನೆ. ಈ ರೀತಿ ನಾನು ಹೇಳಿದ್ದಕ್ಕೆ ನಾಚಿಕೆಪಡುವುದಿಲ್ಲ ಏಕೆಂದರೆ ಇದು ನನಗೆ ಸಂಭವಿಸಿದೆ ಮತ್ತು ಅಪರಾಧಿಯು ತನ್ನ ಬಳಿ ಇರುವುದಕ್ಕೆ ನಾಚಿಕೆಪಡಬೇಕು ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


