ಕಣ್ಣೂರು: ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ ನರ್ಸಿಂಗ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ರಾಮಪುರಂನಲ್ಲಿ ನಡೆದಿದೆ.
ಶುಕ್ರವಾರ ಸಂಜೆ ಕರ್ನಾಟಕದಿಂದ ಎರ್ನಾಕುಲಂಗೆ ತೆರಳುತ್ತಿದ್ದಾಗ ಟ್ಯಾಂಕರ್ ಲಾರಿಯಿಂದ ಹೈಡ್ರೋಕ್ಲೋರಿಕ್ ಆಯಸಿಡ್ ಸೋರಿಕೆಯಾಗಿದೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸೋರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಯತ್ನಿಸಿದರಾದರೂ. ಸಂಪೂರ್ಣ ತಡೆ ಸಾಧ್ಯವಾಗಿಲ್ಲ.
ಗ್ಯಾಸ್ ಸೋರಿಕೆಯ ಪರಿಣಾಮ ಇಲ್ಲಿನ ಸಮೀಪದ ಕಾಲೇಜು ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಅವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಮತ್ತು ಪಳಯಾಂಗಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು.
ಸದ್ಯ ಟ್ಯಾಂಕರ್ ನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಗ್ಯಾಸ್ ಅನ್ನು ಮತ್ತೊಂದು ಟ್ಯಾಂಕರ್‌ಗೆ ವರ್ಗಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


