nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    November 7, 2026

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    November 7, 2026

    ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ

    November 7, 2026
    Facebook Twitter Instagram
    ಟ್ರೆಂಡಿಂಗ್
    • ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ
    • ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ
    • ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ
    • ಶಾಲೆ ಬಳಿ ರಸ್ತೆ ಉಬ್ಬು ತೆರವು: ಮಕ್ಕಳ ಸುರಕ್ಷತೆಗೆ ಆತಂಕ,  ಮರು ಅಳವಡಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಎಚ್ಚರಿಕೆ
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    • ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ
    ಮಧುಗಿರಿ November 7, 2026

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    By Ganesh TumkuruNovember 7, 2026No Comments2 Mins Read
    priyank kharge.jpg

    ಮಧುಗಿರಿ : ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಡಿದ್ದಾರೆ ಎನ್ನಲಾದ ‘ಹಳ್ಳಿಗುಗ್ಗು’ ಎಂಬ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆಯನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ‘ನಾವು ಹಳ್ಳಿಗುಗ್ಗುಗಳೇ ಏನಿವಾಗ?’ ಎಂಬ ಅಭಿಯಾನ ಆರಂಭಿಸಿದ್ದು, ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಪಟ್ಟಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಜೆಡಿಎಸ್ ಅಧ್ಯಕ್ಷ ಬಿಜವರ ಶ್ರೀನಿವಾಸ್, ಪ್ರಿಯಾಂಕ್ ಖರ್ಗೆ ಅವರು ತಮ್ಮ ಹೇಳಿಕೆಗೆ ತಕ್ಷಣ ಕ್ಷಮೆಯಾಚಿಸಬೇಕು. ನಿಮ್ಮ ಕ್ಷೇತ್ರದಲ್ಲಿ ಹಳ್ಳಿಗಳಿಲ್ಲವೇ? ಅಲ್ಲಿನ ಗ್ರಾಮಸ್ಥರು ನಿಮಗೆ ಮತ ಹಾಕಿಲ್ಲವೇ? ದೇಶದ ಶೇ.70ರಷ್ಟು ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದಾರೆ. ಕೋಟ್ಯಂತರ ಗ್ರಾಮೀಣ ಜನರ ಭಾವನೆಗಳಿಗೆ ನಿಮ್ಮ ಹೇಳಿಕೆ ನೋವುಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಹಳ್ಳಿಯ ಜನರು ದುಡಿಯದಿದ್ದರೆ ನಗರ ಪ್ರದೇಶದ ಜನರಿಗೆ ಆಹಾರ, ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು ದೊರೆಯುವುದಿಲ್ಲ. ಕುಮಾರಸ್ವಾಮಿ ಹಾಗೂ ದೇವೇಗೌಡರ ರಾಜಕೀಯ ಕೊಡುಗೆ ಏನೆಂಬುದು ದೇಶಕ್ಕೆ ತಿಳಿದಿದೆ. ರಾಜಕೀಯ ನಾಯಕರನ್ನು ಟೀಕಿಸುವ ಭರದಲ್ಲಿ ರೈತರು ಹಾಗೂ ಗ್ರಾಮೀಣ ಜನರನ್ನು ಅವಮಾನಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷ ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

    ಗ್ರಾಮ ಪಂಚಾಯಿತಿ ಸದಸ್ಯರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ದೊಡ್ಡೇರಿ ವಿಜಿಕುಮಾರ್ ಮಾತನಾಡಿ, ರಾಜಕೀಯ ನಾಯಕರ ಓಲೈಕೆಗಾಗಿ ಗ್ರಾಮೀಣ ಜನರ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ. ಆಡಳಿತಾರೂಢ ಪಕ್ಷದ ಜವಾಬ್ದಾರಿಯುತ ಸಚಿವರಾಗಿ ಬಳಸುವ ಪದಗಳ ಬಗ್ಗೆ ಎಚ್ಚರಿಕೆ ಇರಬೇಕು. ಆಡುಭಾಷೆಯ ಮಾತು ಎಂದು ಸಮರ್ಥಿಸಿಕೊಳ್ಳುವವರು ಉತ್ತರ ಕರ್ನಾಟಕದ ಆಡುಭಾಷೆಯಲ್ಲಿ ಇದೇ ರೀತಿಯ ಪದಗಳನ್ನು ಬಳಸಿದರೆ ಹೇಗಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ಹಿನ್ನಡೆ ಉಂಟುಮಾಡಲಿದೆ ಎಂದು ಹೇಳಿದರು.

    ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಹಿಂದುಳಿದ ವರ್ಗದ ಮುಖಂಡೆ ಲಕ್ಷ್ಮಮ್ಮ ವೀರಣ್ಣಗೌಡ ಮಾತನಾಡಿ, ಹಳ್ಳಿಯ ಮಣ್ಣಿನ ಮಕ್ಕಳ ಶಕ್ತಿ ಮತ್ತು ಸಾಮರ್ಥ್ಯ ಇಡೀ ದೇಶಕ್ಕೆ ತಿಳಿದಿದೆ. ರೈತರು ಬೆಳೆದ ಆಹಾರ ಪದಾರ್ಥಗಳು, ಹಾಲು, ಹಣ್ಣು ಹಾಗೂ ತರಕಾರಿಗಳಿಲ್ಲದೆ ನಗರ ಪ್ರದೇಶದ ಜನರ ಬದುಕು ಸಾಧ್ಯವಿಲ್ಲ. ಗ್ರಾಮೀಣ ಜನರ ಬಗ್ಗೆ ಮಾತನಾಡುವಾಗ ನಾಲಿಗೆಯ ಮೇಲೆ ಹಿಡಿತವಿರಬೇಕು. ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಪರವಾಗಿ ಹಲವು ಕೆಲಸಗಳನ್ನು ಮಾಡಿದ್ದಾರೆ. ಗ್ರಾಮೀಣ ಜನರ ಭಾವನೆಗಳಿಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದರು.

    ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರ ರಾಜಕೀಯ ಅನುಭವದ ಮುಂದೆ ಪ್ರಿಯಾಂಕ್ ಖರ್ಗೆ ಅವರ ಅನುಭವ ಕಡಿಮೆ. ಇಂತಹ ಹಿರಿಯ ನಾಯಕರನ್ನು ಹಳ್ಳಿಗುಗ್ಗು ಎಂದು ಸಂಬೋಧಿಸಿರುವುದು ಅವರ ಅಹಂಕಾರವನ್ನು ತೋರಿಸುತ್ತದೆ. ಅನ್ನದಾತರ ಬಗ್ಗೆ ಕೀಳಾಗಿ ಮಾತನಾಡಿರುವುದಕ್ಕೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬೆಲೆ ತೆರಬೇಕಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಜೆಡಿಎಸ್ ಹೋಬಳಿ ಅಧ್ಯಕ್ಷರಾದ ನರಸಿಂಹರೆಡ್ಡಿ, ಮೂರ್ತಣ್ಣ, ರಾಮಚಂದ್ರಣ್ಣ, ಗೋಪಾಲ್, ರವಿಕುಮಾರ್, ಮುಖಂಡರಾದ ಸಿದ್ದರಗಲ್ಲು ಶ್ರೀನಿವಾಸ್, ದ್ವಾರಕೀಶ್, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ರಾಮಚಂದ್ರ, ಗೋವಿಂದರಾಜು, ರಂಗನಾಥ್, ಚಂದ್ರಕುಮಾರ್, ಬಾವಿಮನೆ ಕಾಂತಣ್ಣ, ಉಮೇಶ್, ಗಬಾಲಿ ರಾಜಣ್ಣ, ಮೋಹನ್, ಶ್ರೇಯಸ್, ಟಪಾಲ್ ಮಂಜುನಾಥ್, ಗಂಗರಾಜು, ನರಸಿಂಹರಾಜು, ಭಾಸ್ಕರರೆಡ್ಡಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಶಾಲೆ ಬಳಿ ರಸ್ತೆ ಉಬ್ಬು ತೆರವು: ಮಕ್ಕಳ ಸುರಕ್ಷತೆಗೆ ಆತಂಕ,  ಮರು ಅಳವಡಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಎಚ್ಚರಿಕೆ

    November 7, 2026

    ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ

    November 6, 2026

    ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!

    November 4, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ನಾವು ಹಳ್ಳಿಗುಗ್ಗುಗಳೇ ಏನಿವಾಗ? :  ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಪ್ರಶ್ನೆ

    November 7, 2026

    ಮಧುಗಿರಿ : ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ…

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    November 7, 2026

    ನರಕ ಚತುರ್ದಶಿಯ ಅಭ್ಯಂಗ ಸ್ನಾನಕ್ಕೆ ಯಾವ ಎಣ್ಣೆ ಬಳಸಬೇಕು? ಎಣ್ಣೆ ಆಯ್ಕೆ ಮಾಡುವ ಮುನ್ನ ಈ ವಿಷಯಗಳನ್ನು ಗಮನಿಸಿ

    November 7, 2026

    ಶಾಲೆ ಬಳಿ ರಸ್ತೆ ಉಬ್ಬು ತೆರವು: ಮಕ್ಕಳ ಸುರಕ್ಷತೆಗೆ ಆತಂಕ,  ಮರು ಅಳವಡಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಎಚ್ಚರಿಕೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.