ತಿಪಟೂರು: ಊಟ ಮಾಡಿ ತಟ್ಟೆ ತೊಳೆಯಲು ಹೋದ ವಿದ್ಯಾರ್ಥಿಗಳಿಬ್ಬರು ಮರಳಿ ಬಾರದೇ ನಾಪತ್ತೆಯಾಗಿರುವ ಘಟನೆ ತಿಪಟೂರಿನ ಕೋಟನಾಯಕನಹಳ್ಳಿ ರುದ್ರಮುನಿ ಸ್ವಾಮೀಜಿಯವರ ಶಾಲಾ ಆವರಣದಲ್ಲಿ ನಡೆದಿದೆ.
ಜುಲೈ 28ರಂದು ರಾತ್ರಿ ಸುಮಾರು 9:30ರ ವೇಳೆಗೆ ಈ ಘಟನೆ ನಡೆದಿದೆ. ಊಟ ಮಾಡಿದ ತಟ್ಟೆಯನ್ನು ತೊಳೆಯಲು ಹೋದ ಇಬ್ಬರು ವಿದ್ಯಾರ್ಥಿಗಳು ಪರಾರಿಯಾಗಿದ್ದು, ಹೊನ್ನವಳ್ಳಿ ಹೋಬಳಿಯ ಗೋಪಿ. ಬಿ.ಎಲ್. ಬಸವರಾಜಪುರ ಹಾಗೂ ಬಿಸಿಲೆಹಳ್ಳಿ ನೊಣವಿನಕೆರೆ ಹೋಬಳಿಯ ಯತೀಶ್. ಬಿ.ಎನ್. ನಾಪತ್ತೆಯಾದ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ಘಟನೆ ಸಂಬಂಧ ತಿಪಟೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿದ್ಯಾರ್ಥಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಪೂರ್ವ ಯೋಜಿತವಾಗಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz