ಭಾರೀ ಕುತೂಹಲ ಕೆರಳಿಸಿದ್ದ ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡಿದೆ. ಎನ್ ಡಿಎ ನಾಯಕನಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.
ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಲಿದ್ದಾರೆ. ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಈ ವೇಳೆ ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ.
ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್ ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು. ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್‌ಜೆಪಿ(ರಾಮ್ ವಿಲಾಸ್) ಐದು ಸ್ಥಾನಗಳನ್ನು ಗೆದ್ದು ಮೋದಿ ಮೂರನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್ ಡಿಎ) ನಾಯಕರು ಔಪಚಾರಿಕವಾಗಿ ಮೋದಿಯವರ ನಾಯಕತ್ವವನ್ನು ಬೆಂಬಲಿಸಿದ್ದು, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿವೆ ಎಂದು ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


