ಕೊರಟಗೆರೆ: ತಾಲ್ಲೂಕಿನ ಕುರಂಕೋಟೆ ಗ್ರಾಮದ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ದೇವರಾಜು (56) ಎಂಬುವರು ಸೋಮವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಾಲೆ ವಿದ್ಯಾರ್ಥಿನಿ ಜತೆಗೆ ದೇವರಾಜು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿತ್ತು ಎನ್ನಲಾಗಿದೆ. ಈ ಸಂಬಂಧ ಕೆಲವು ಹಿರಿಯರು ಸೇರಿಕೊಂಡು ವಿದ್ಯಾರ್ಥಿನಿ ಕುಟುಂಬದವರ ಜತೆಗೆ ರಾಜಿ ಸಂಧಾನ ನಡೆಸಿದ್ದರು.
ಇದರ ನಡುವೆ ಕೆಲವು ಮಧ್ಯವರ್ತಿಗಳು, ಯೂಟ್ಯೂಬ್ ಪತ್ರಕರ್ತರು ಎಂದು ಹೇಳಿಕೊಂಡವರು ಹಣಕ್ಕಾಗಿ ಪೀಡಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


