ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊರಟಗೆರೆಯ ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕೊರಟಗೆರೆಯ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿರುತ್ತಿರುವ ಡಿ.ಆರ್.ಶಿಲ್ಪಶ್ರೀ 2007ರಲ್ಲಿ ಶಿಕ್ಷಕಿಯಾಗಿ ನೇಮಕಗೊಂಡು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೋಟಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ.
2010ರಲ್ಲಿ ಕೊರಟಗೆರೆ ತಾಲ್ಲೂಕಿನ ಚಟ್ಟೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ವರ್ಗಾವಣೆಗೊಂಡು ಪ್ರಾಮಾಣಿಕ ಸೇವೆ ಸಲ್ಲಿಸಿರುತ್ತಾರೆ. ತದ ನಂತರ 2014 ರಿಂದ ಅಕ್ಕಿರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವರ್ಗಾವಣೆ ಅಗಿ ಕರ್ತವ್ಯ ನಿರ್ವಹಿಸಿರುತ್ತಾರೆ, ನಂತರ 2019 ರಿಂದ ಕೊರಟಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇವರ ಕರ್ತವ್ಯ ನಿಷ್ಠೆ ಮತ್ತು ನಿಸ್ವಾರ್ಥ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ರೀತಿಯಲ್ಲಿನ ಸೇವೆಯನ್ನು ಗುರುತಿಸಿದ ವಿಜಯ ಸೇವೆ ಸಂಘಟನೆಯು ವೀರ ವನಿತೆ ಬೆಳವಾಡಿ ಮಲ್ಲಮ್ಮ ಎಂಬ ರಾಜ್ಯ ಪ್ರಶಸ್ತಿಯನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಹ. ನೀ. ದೀಪಕ್ ಅವರು ನೀಡಿ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿ ಗೌರವಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


