ಬೆಂಗಳೂರು : ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಸೇರಿದಂತೆ ಶಿಕ್ಷಣ ಇಲಾಖೆಯ ಐವರು ಹಿರಿಯ ಅಧಿಕಾರಿಗಳು ಹಾಗೂ ಓರ್ವ ಕಂಪ್ಯೂಟರ್ ಆಪರೇಟರ್ ನನ್ನು ಬಂಧಿಸಲಾಗಿದೆ.
ರಾಜ್ಯ ಸಮಗ್ರ ಶಿಕ್ಷಣ ಅಭಿಯಾನದ ನಿರ್ದೇಶಕಿ ಗೀತಾ, ಪಠ್ಯ ಪುಸ್ತಕ ವಿಭಾಗದ ನಿರ್ದೇಶಕ ಮಾದೇಗೌಡ, ನಿವೃತ್ತ ಜಂಟಿ ನಿರ್ದೇಶಕ ಬಸವರಾಜ್, ರತ್ನಯ್ಯ, ಶಿವಕುಮಾರ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ಕಚೇರಿ ಕಂಪ್ಯೂಟರ್ ಆಪರೇಟರ್ ನರಸಿಂಹರಾವ್ ಬಂಧಿಸಲಾಗಿದೆ.
ಆರೋಪಿಗಳನ್ನು ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆ ಸಿಐಡಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


