ಪಾವಗಡ: ತಾಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ರಾಜಗೋಪಾಲ ಇವರು ಕರ್ನಾಟಕ ವಾಲ್ಮೀಕಿರತ್ನ ಪ್ರಶಸ್ತಿ – 2025ಕ್ಕೆ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯನ್ನು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ, ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ (ರಿ), ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾ. ಮೆಳೇಗೋಟೆ ಕ್ರಾಸ್, ಮಹರ್ಷಿ ವಾಲ್ಮೀಕಿ ಗುರುಪೀಠ, ಸಮುದಾಯ ಭವನದಲ್ಲಿ ಅಕ್ಟೋಬರ್ 26ರಂದು ಪ್ರದಾನ ಮಾಡಲಾಗುತ್ತದೆ.
ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ನಾಗಶಕ್ತಿ ಶ್ರೀಶ್ರೀಶ್ರೀ ವಾಲ್ಮೀಕಿ ಬ್ರಹ್ಮನಾಂದ ಗುರೂಜಿ, ಪೀಠಾಧ್ಯಕ್ಷರು ಶ್ರೀ ಮಹರ್ಷಿ ವಾಲ್ಮೀಕಿ ದೊಡ್ಡಬಳ್ಳಾಪುರ ಇವರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC