ಶಿಕ್ಷಕರ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ಜಾರಿ ನಿರ್ದೇಶನಾಲಯದ ದಾಳಿ. ಹಗರಣದಲ್ಲಿ ಭಾಗಿಯಾಗಿರುವ ಚಾರ್ಟರ್ಡ್ ಅಕೌಂಟೆಂಟ್ ಗಳು ಮತ್ತು ಉದ್ಯಮಿಗಳು ಸೇರಿದಂತೆ ಹಲವಾರು ವ್ಯಕ್ತಿಗಳ ನಿವಾಸಗಳು ಮತ್ತು ಕಚೇರಿಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ.
ಕೋಲ್ಕತ್ತಾದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಉದ್ಯಮಿಗಳಾದ ಸುಬೋಧ್ ಸಾಚಾರ್ ಮತ್ತು ಅಶೋಕ್ ಯದುಕಾ ಅವರ ಮಾಣಿಕ್ತಾಲಾದ ಎರಡು ಫ್ಲಾಟ್ ಗಳು ಮತ್ತು ಬುರಾಬಜಾರ್ ನಲ್ಲಿರುವ ಚಾರ್ಟರ್ಡ್ ಅಕೌಂಟೆಂಟ್ ನಿವಾಸದಲ್ಲಿ ಶೋಧ ನಡೆಸಲಾಗಿದೆ.


