ತುಮಕೂರು: ಮಾರ್ಚ್ 21ರಿಂದ ಎಸ್ ಎಸ್ ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಮಕ್ಕಳವಿದ್ಯಾಭ್ಯಾಸದ ಕಡೆ ಶಿಕ್ಷಕರು ಗಮನಕೊಟ್ಟು ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರುವಂತೆ ಪಾಠ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಭು ಜಿ. ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಕುಂಠಿತವಾಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಪ್ರತೀಮಕ್ಕಳವಿಶ್ಲೇಷಣೆ
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ವಿದ್ಯಾಭ್ಯಾಸ ಮತ್ತು ಕಲಿಕೆಯ ಬಗ್ಗೆ ಶಿಕ್ಷಕರು ವೈಯಕ್ತಿಕವಾಗಿ ವಿದ್ಯಾರ್ಥಿಗಳನ್ನು ವಿಶ್ಲೇಷಣೆ ಮಾಡಿ ಯಾವ ವಿಷಯದಲ್ಲಿ ಮಕ್ಕಳು ಹಿಂದುಳಿದಿದ್ದಾರೆ ಎಂದು ಪಟ್ಟಿ ತಯಾರಿಸಬೇಕು. ಅಂತಹ ಮಕ್ಕಳಿಗೆ ವಿಶೇಷ ತರಗತಿಗಳನ್ನು ನೀಡಿ ಓದಿನಲ್ಲಿ ಮುಂದೆ ಬರುವಂತೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ದಿ) ಸಂಜೀವಪ್ಪ, ಉಪಕಾರ್ಯದರ್ಶಿ (ಆಡಳಿತ) ಹಾಲಸಿದ್ದಪ್ಪ ಪೂಜೇರಿ, ಶಾಲಾಶಿಕ್ಷಣ ಇಲಾಖೆ ಮಧುಗಿರಿ ವಿಭಾಗದ ಉಪ ನಿರ್ದೇಶಕರಾದ ಗಿರಿಜಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx