ಬೆಂಗಳೂರು: ಬೆಳಗಾವಿಯಲ್ಲಿ ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು.
ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಬಿಇಓ, ಡಿಡಿಪಿಐಗಳ ಗಮನಕ್ಕೆ ತರಬೇಕು. ಏಕಾಏಕಿ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದಿದ್ದಾರೆ.
ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು. ಹೀಗೆ ಮಾಡೋದು ಸರಿಯಲ್ಲ. ಪ್ರತಿಭಟನೆ ಮಾಡೋಕೆ ಸರ್ಕಾರದಲ್ಲಿ ಅವಕಾಶ ಇಲ್ಲ. ಅವರ ಸಮಸ್ಯೆ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಇಂತಹ ವಿಷಯಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ. ಅನೇಕರು ನನಗೆ ಅಮಾನತು ವಾಪಸ್ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಈಗ ಅಮಾನತು ವಾಪಸ್ ಪಡೆಯಬೇಕು ಅಂತ ಕಡತ ತರಿಸಿದ್ದೇನೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW