ಬೆಂಗಳೂರು: ಪತ್ನಿಯ ಕಿರುಕುಳ ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಬೆಂಗಳೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನಿಖಿತಾ ಸಿಂಘಾನಿಯಾ, ನಿಶಾ ಸಿಂಘಾನಿಯ ಹಾಗೂ ಅನುರಾಗ್ ಸಿಂಘಾನಿಯಾಗೆ 29ನೇ ಸಿಸಿಎಚ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅತುಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದರು.
ಈ ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಜ.4ರಂದು ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿ ಇತ್ಯರ್ಥ ಮಾಡುವಂತೆ ಕೆಳ ನ್ಯಾಯಾಲಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆ ಇಂದು ಅರ್ಜಿ ವಿಚಾರಣೆ ನಡೆಸಿ, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx