ಬೀದರ್: ಜಿಲ್ಲೆಯ ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಸುವರ್ಣಸೌಧದ ಸಮಿತಿ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹೀಂ ಖಾನ್, ಶಾಸಕರ ಉಪಸ್ಥಿತಿಯಲ್ಲಿ ಸಂತ್ರಸ್ತರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಇದು ಹಲವು ವರ್ಷಗಳ ಹಿಂದಿನ ಸಮಸ್ಯೆಯಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx