ಕೊರಟಗೆರೆ: ರಾಷ್ಟ್ರೀಯ ಹಬ್ಬಗಳ ಪೂರ್ವಭಾವಿ ಸಭೆಗಳಿಗಾಗಲಿ ರಾಷ್ಟ್ರೀಯ ಹಬ್ಬದ ದಿನದಲ್ಲಿ ಕಾರ್ಯಕ್ರಮಕ್ಕೆ ಗೈರಾಗುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಂದು ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮಂಜುನಾಥ್ ಕೆ. ಎಚ್ಚರಿಕೆ ನೀಡಿದ್ದಾರೆ.
ಇಂದು ಕೊರಟಗೆರೆ ತಾಲೂಕು ಕಚೇರಿ ಕೋರ್ಟ್ ಆವರಣದಲ್ಲಿ ನಡೆದ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ವಿರುದ್ಧ ತಹಶೀಲ್ದಾರ್ ಮಂಜುನಾಥ್ ಕೆ ಗರಂ ಆಗಿದ್ದಾರೆ.
ವರ್ಷದಲ್ಲಿ ಮೂರು ರಾಷ್ಟ್ರೀಯ ಹಬ್ಬಗಳು ಬರುತ್ತವೆ ಅಂತಹ ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿಗಳು ತಪ್ಪದೇ ಇರಲೇಬೇಕು. ಇನ್ನು ಮುಂದೆ ರಾಷ್ಟ್ರೀಯ ಹಬ್ಬಗಳ ದಿನದಂದು ಕಾರ್ಯಕ್ರಮಕ್ಕೆ ಹಾಜರಾಗದೆ ತಪ್ಪಿಸಿಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಬದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಮಂಜುನಾಥ್ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.
ಇನ್ನು ಇದೇ ಸಂದರ್ಭದಲ್ಲಿ ಕೆಲವು ಇಲಾಖೆ ಅಧಿಕಾರಿಗಳು ಮಾತ್ರ ಹಾಜರಾಗಿದ್ದು ಹಾಜರಾಗದೆ ಇದ್ದ ಅಧಿಕಾರಿಗಳ ಮೇಲೆ ಬೇಸರ ವ್ಯಕ್ತಪಡಿಸಿದರು.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.